5.ನಿಜವಾಗಿ ನಾವು ಮಲಕ್ಗಳನ್ನು ಸತ್ಯದೊಂದಿಗೆ ಮಾತ್ರ ಕಳುಹಿಸುತ್ತೇವೆ. ಆದರೆ ಆಗ ಅವರಿಗೆ (ಧಿಕ್ಕಾರಿಗಳಿಗೆ) ಹೆಚ್ಚಿನ ಕಾಲಾವಧಿ ನೀಡಲಾಗುವುದಿಲ್ಲ
11.ಒಂದು ವೇಳೆ ನಾವು ಅವರ ಪಾಲಿಗೆ ಆಕಾಶದ ಒಂದು ಬಾಗಿಲನ್ನು ತೆರೆದಿದ್ದರೆ ಮತ್ತು ಅವರು ಆ ಮೂಲಕ ಮೇಲೇರುತ್ತಲೇ ಇದ್ದಿದ್ದರೆ –
12.ಆಗಲೂ ಅವರು, ‘‘ನಮ್ಮ ದೃಷ್ಟಿಗಳನ್ನು ವಂಚಿಸಲಾಗಿದೆ, ನಿಜವಾಗಿ ನಮ್ಮನ್ನು ಮಂತ್ರ ಮುಗ್ಧಗೊಳಿಸಲಾಗಿದೆ’’ ಎಂದೇ ಹೇಳುತ್ತಿದ್ದರು
13.ಖಂಡಿತವಾಗಿಯೂ ನಾವು ಆಕಾಶದಲ್ಲಿ ತಾರಾ ಮಂಡಲಗಳನ್ನು ನಿರ್ಮಿಸಿದೆವು ಮತ್ತು ನಾವು ಅವುಗಳನ್ನು ನೋಡುವವರ ಪಾಲಿಗೆ ಅಲಂಕಾರವಾಗಿಸಿದೆವು
16.ಹಾಗೆಯೇ ನಾವು ಭೂಮಿಯನ್ನು ಹರಡಿದೆವು ಮತ್ತು ಅದರಲ್ಲಿ ಬೆಟ್ಟಗಳನ್ನು ನೆಟ್ಟೆವು ಹಾಗೂ ಅದರಲ್ಲಿ ಎಲ್ಲವನ್ನೂ ಸಮರ್ಪಕ ಪ್ರಮಾಣದಲ್ಲಿ ಬೆಳೆಸಿದೆವು
18.ನಮ್ಮ ಬಳಿ ಪ್ರತಿಯೊಂದು ವಸ್ತುವಿನ ಭಂಡಾರಗಳೇ ಇವೆ. (ಆದರೆ) ನಾವು ಅವುಗಳನ್ನು ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಮಾತ್ರ ಇಳಿಸಿಕೊಡುತ್ತೇವೆ
19.ನಾವು ನೀರು ತುಂಬಿದ ಗಾಳಿಯನ್ನು ರವಾನಿಸಿದೆವು ಮತ್ತು ನಾವು ಆಕಾಶದಿಂದ ನೀರನ್ನು ಇಳಿಸಿ ಅದನ್ನು ನಿಮಗೆ ಕುಡಿಸಿದೆವು. ಅದೇನೂ ನಿಮ್ಮ ಸಂಗ್ರಹದಲ್ಲಿರಲಿಲ್ಲ
20.ಖಂಡಿತ ನಾವೇ (ಎಲ್ಲರನ್ನೂ) ಜೀವಂತಗೊಳಿಸುವವರು ಹಾಗೂ ಸಾಯಿಸುವವರಾಗಿದ್ದೇವೆ ಮತ್ತು (ಅಂತಿಮವಾಗಿ) ನಾವೇ ಎಲ್ಲರ ಉತ್ತರಾಧಿಕಾರಿಗಳಾಗಿರುತ್ತೇವೆ
22.ಖಂಡಿತ ನಿಮ್ಮ ಒಡೆಯನೇ ಅವರೆಲ್ಲರನ್ನೂ ಒಂದೆಡೆ ಸೇರಿಸುವನು. ಅವನು ಖಂಡಿತ ತುಂಬಾ ಯುಕ್ತಿವಂತನೂ ಅರಿವು ಉಳ್ಳವನೂ ಆಗಿದ್ದಾನೆ
25.ನಿಮ್ಮ ಒಡೆಯನು, ಮಲಕ್ಗಳೊಡನೆ ಹೀಗೆಂದಿದ್ದನು; ನಾನು ಕರಿ ಆವೆ ಮಣ್ಣಿನ ಒಣಗಾರೆಯಿಂದ ಒಬ್ಬ ಮಾನವನನ್ನು ಸೃಷ್ಟಿಸಲಿದ್ದೇನೆ
33.ಅವನು ಹೇಳಿದನು; ‘‘ನನ್ನೊಡೆಯಾ, (ಎಲ್ಲ ನಿರ್ಜೀವಿಗಳನ್ನು) ಜೀವಂತಗೊಳಿಸಲಾಗುವ ದಿನದ ತನಕ ನನಗೆ ಕಾಲಾವಕಾಶವನ್ನು ನೀಡು.’’
36.ಅವನು (ಇಬ್ಲೀಸ್) ಹೇಳಿದನು; ನನ್ನೊಡೆಯಾ, ನೀನು ನನ್ನನ್ನು ದಾರಿ ತಪ್ಪಿಸಿರುವುದರಿಂದ ನಾನು (ತಪ್ಪು ದಾರಿಯನ್ನು) ಭೂಮಿಯಲ್ಲಿರುವವರಿಗೆ ಚಂದಗಾಣಿಸುವೆನು ಮತ್ತು ಅವರೆಲ್ಲರನ್ನೂ ದಾರಿತಪ್ಪಿಸಿ ಬಿಡುವೆನು
44.ಅವರ ಎದೆಗಳಲ್ಲಿ ಉಳಿದಿದ್ದ ವೈಷಮ್ಯವನ್ನೆಲ್ಲಾ ನಾವು ಕಿತ್ತೆಸೆದೆವು – ಅವರು ಸಹೋದರರಾಗಿ ಆಸನಗಳಲ್ಲಿ ಎದುರು ಬದುರಾಗಿ ಕುಳಿತಿರುವರು
49.ಅವರು, ಅವರ ಬಳಿಗೆ ಬಂದಾಗ ‘ಸಲಾಮ್’ (ಶಾಂತಿ) ಎಂದರು. ಆಗ ಅವರು (ಇಬ್ರಾಹೀಮರು), ನಮಗೆ ನಿಮ್ಮ ಕುರಿತು ಆತಂಕವಿದೆ ಎಂದರು
51.ಅವರು (ಇಬ್ರಾಹೀಮ್) ಹೇಳಿದರು; ನೀವೇನು ಮುದಿತನ ಆವರಿಸಿರುವ ನನಗೆ ಶುಭವಾರ್ತೆ ನೀಡುತ್ತಿರುವಿರಾ – ಅದೆಂತಹ ಶುಭವಾರ್ತೆ ನೀಡುತ್ತಿರುವಿರಿ ನೀವು
60.ಅವರು ಹೇಳಿದರು; ನಿಜವಾಗಿ, ಅವರು (ಲೂತ್ರ ನಾಡಿನವರು) ಯಾವುದರ ಕುರಿತು ಸಂಶಯದಲ್ಲಿದ್ದರೋ ಅದನ್ನೇ (ದೇವರ ಶಿಕ್ಷೆಯನ್ನೇ) ನಾವು ತಂದಿರುವೆವು
62.ನೀವು ರಾತ್ರಿಯ ಒಂದು ಹಂತದಲ್ಲಿ ನಿಮ್ಮ ಮನೆಯವರ ಜೊತೆ ಹೊರಟು ಹೋಗಿರಿ ಮತ್ತು ನೀವು ಸ್ವತಃ ಅವರನ್ನು ಹಿಂಬಾಲಿಸುತ್ತಾ ಅವರ ಬೆನ್ನು ಬೆನ್ನಿಗೇ ನಡೆಯಿರಿ. ನಿಮ್ಮಲ್ಲಿ ಯಾರೂ ಹಿಂದಿರುಗಿ ನೋಡಬಾರದು ಮತ್ತು ನೀವು ನಿಮಗೆ ಆದೇಶಿಸಲಾಗಿರುವ ಕಡೆಗೇ ಹೋಗಿರಿ
63.ಬೆಳಗಾಗುವ ಹೊತ್ತಿಗೆ ಆ ಜನರ ಮೂಲವನ್ನೇ ಕಡಿದು ಬಿಡಲಾಗಿರುವುದು ಎಂಬ ಆ ವಿಷಯವನ್ನು ನಾವು ಅವರಿಗೆ (ಲೂತ್ರಿಗೆ) ಖಚಿತವಾಗಿ ತಿಳಿಸಿದೆವು
82.ಆಕಾಶಗಳನ್ನು ಹಾಗೂ ಭೂಮಿಯನ್ನು ಹಾಗೂ ಅವುಗಳ ನಡುವೆ ಇರುವ ಎಲ್ಲವನ್ನೂ ನಾವು ಸತ್ಯದೊಂದಿಗೇ ಸೃಷ್ಟಿಸಿದ್ದೇವೆ. ಅಂತಿಮ ಘಳಿಗೆಯು ಖಂಡಿತ ಬರಲಿದೆ. ನೀವು (ಜನರನ್ನು) ಕ್ಷಮಿಸಿರಿ – ಅದು ಅತ್ಯಂತ ಸುಂದರ ಕ್ಷಮೆಯಾಗಿರಲಿ
84.ಖಂಡಿತವಾಗಿಯೂ ನಾವು ನಿಮಗೆ ಮತ್ತೆ ಮತ್ತೆ ಓದಲಾಗುವ ಏಳು ವಾಕ್ಯಗಳನ್ನು (ಪ್ರಥಮ ಅಧ್ಯಾಯವನ್ನು) ಮತ್ತು ಭವ್ಯವಾದ ಕುರ್ಆನನ್ನು ನೀಡಿರುವೆವು
85.ಅವರಲ್ಲಿನ ( ಧಿಕ್ಕಾರಿಗಳಲ್ಲಿನ) ವಿವಿಧ ವರ್ಗಗಳಿಗೆ ನಾವು ಏನನ್ನು ನೀಡಿರುವೆವೋ ಅವುಗಳೆಡೆಗೆ ನೀವು ಕಣ್ಣೆತ್ತಿಯೂ ನೋಡಬೇಡಿ ಮತ್ತು ನೀವು ಅವರ ಕುರಿತು ದುಃಖಿಸಬೇಡಿ. ಹಾಗೆಯೇ, ವಿಶ್ವಾಸಿಗಳ ಪಾಲಿಗೆ ನೀವು (ವಿನಯದೆೊಂದಿಗೆ) ನಿಮ್ಮ ಭುಜವನ್ನು ತಗ್ಗಿಸಿಡಿರಿ
97.ಬಂದು ಬಿಟ್ಟಿತು, ಅಲ್ಲಾಹನ ಆದೇಶ – ನೀವು ಅದಕ್ಕಾಗಿ ಆತುರ ಪಡಬೇಡಿ. ಅವನು ತುಂಬಾ ಪಾವನನು ಮತ್ತು ಅವರು (ಅವನ ಜೊತೆ) ಪಾಲುಗೊಳಿಸುವ ಎಲ್ಲವುಗಳಿಗಿಂತಲೂ ಅವನು ತುಂಬಾ ಉನ್ನತನು
98.‘‘ನನ್ನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ ನನಗೆ ಮಾತ್ರ ಅಂಜಿರಿ’’ – ಎಂದು (ಜನರನ್ನು) ಎಚ್ಚರಿಸಲಿಕ್ಕಾಗಿ ಅವನು ತನ್ನ ಆದೇಶದಂತೆ ದಿವ್ಯವಾಣಿಯನ್ನು ಕೊಟ್ಟು, ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಬಳಿಗೆ, ಮಲಕ್ಗಳನ್ನು ಇಳಿಸಿಕೊಡುತ್ತಾನೆ
99.ಅವನು ಆಕಾಶಗಳನ್ನು ಹಾಗೂ ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುವನು. ಅವರು (ಅವನ ಜೊತೆ) ಪಾಲುಗೊಳಿಸುತ್ತಿರುವ ಎಲ್ಲವುಗಳಿಗಿಂತ ಅವನು ಉನ್ನತನು