عبدالسلام پوتیگه · ಕನ್ನಡ

1.ಇದು ಎಲ್ಲ ಲೋಕಗಳ ಒಡೆಯನ ಕಡೆಯಿಂದ ಇಳಿಸಲಾಗಿರುವ ಗ್ರಂಥ. ಇದರಲ್ಲಿ ಸಂದೇಹವಿಲ್ಲ
2.(ದೂತರೇ,) ಅವರೇನು, ಈತನೇ ಇದನ್ನು ರಚಿಸಿಕೊಂಡಿದ್ದಾನೆ ಎನ್ನುತ್ತಾರೆಯೇ? ನಿಜವಾಗಿ ಇದು ನಿಮ್ಮ ಒಡೆಯನ ಕಡೆಯಿಂದ ಬಂದಿರುವ ಸತ್ಯವಾಗಿದೆ. ನಿಮಗಿಂತ ಮೊದಲು, ತಮ್ಮ ಬಳಿಗೆ ಎಚ್ಚರಿಸುವವರು ಬಂದಿಲ್ಲದ ಜನಾಂಗವೊಂದನ್ನು ನೀವು ಎಚ್ಚರಿಸಬೇಕೆಂದು. ಮತ್ತು ಅವರು (ಈ ಮೂಲಕ) ಸರಿದಾರಿಗೆ ಬರಬಹುದೆಂದು (ಇದನ್ನು ಕಳಿಸಲಾಗಿದೆ)
3.ಆಕಾಶಗಳನ್ನು, ಭೂಮಿಯನ್ನು ಹಾಗೂ ಅವುಗಳ ನಡುವೆ ಇರುವ ಎಲ್ಲವನ್ನೂ ಅಲ್ಲಾಹನೇ ಆರು ದಿನಗಳಲ್ಲಿ ಸೃಷ್ಟಿಸಿದನು. ಆ ಬಳಿಕ ವಿಶ್ವಸಿಂಹಾಸನವನ್ನು ಆವರಿಸಿದನು. ಅವನ ಹೊರತು ನಿಮಗೆ ರಕ್ಷಕರಾಗಲಿ ಶಿಫಾರಸುದಾರರಾಗಲಿ ಯಾರೂ ಇಲ್ಲ. ನೀವೇನು ಚಿಂತನೆ ನಡೆಸುವುದಿಲ್ಲವೇ
11.ಅಪರಾಧಿಗಳು ತಮ್ಮ ಒಡೆಯನ ಮುಂದೆ ತಲೆಬಾಗಿ, ‘‘ನಮ್ಮೊಡೆಯಾ! ನಾವು ಎಲ್ಲವನ್ನೂ ನೋಡಿಕೊಂಡೆವು ಮತ್ತು ಕೇಳಿಕೊಂಡೆವು. ನಮ್ಮನ್ನೀಗ (ಭೂಮಿಗೆ) ಮರಳಿಸು. ನಾವು ಸತ್ಕರ್ಮಗಳನ್ನು ಮಾಡುವೆವು. ನಾವೀಗ ದೃಢನಂಬಿಕೆ ಉಳ್ಳವರಾಗಿದ್ದೇವೆ’’ ಎಂದು ಹೇಳುವುದನ್ನು ನೀವು ನೋಡುವಂತಿದ್ದರೆ ಚೆನ್ನಾಗಿತ್ತು
12.ನಾವು ಬಯಸಿದ್ದರೆ ಪ್ರತಿಯೊಬ್ಬರಿಗೂ ನೇರಮಾರ್ಗವನ್ನು ಅನುಸರಿಸುವ ಭಾಗ್ಯವನ್ನು ನೀಡಿ ಬಿಡುತ್ತಿದ್ದೆವು. ಆದರೆ, ‘‘ಖಂಡಿತ ನಾನು ನರಕವನ್ನು, ಮಾನವರು ಹಾಗೂ ಜಿನ್ನ್‌ಗಳಿಂದ ತುಂಬಿ ಬಿಡಲಿದ್ದೇನೆ’’ ಎಂಬ ನನ್ನ ಮಾತು ನಿಜವಾಗಿ ಬಿಟ್ಟಿದೆ
19.ಇನ್ನು ಅವಿಧೇಯರಾಗಿದ್ದವರ ಪಾಲಿಗೆ ನರಕವೇ ನೆಲೆಯಾಗಿರುವುದು. ಅವರು ಅದರಿಂದ ಹೊರಹೋಗಲು ಬಯಸಿದಾಗಲೆಲ್ಲಾ ಅವರನ್ನು ಮತ್ತೆ ಅದರೊಳಕ್ಕೆ ಮರಳಿಸಿ ಬಿಡಲಾಗುವುದು ಮತ್ತು ಅವರೊಡನೆ, ‘‘ನೀವು ನಿರಾಕರಿಸುತ್ತಿದ್ದ ನರಕದ ಶಿಕ್ಷೆಯನ್ನು ಸವಿಯಿರಿ’’ ಎನ್ನಲಾಗುವುದು
22.ನಾವು ಈ ಹಿಂದೆ ಮೂಸಾರಿಗೆ, ಗ್ರಂಥವನ್ನು ನೀಡಿದ್ದೆವು. ಅವನನ್ನು (ಅಲ್ಲಾಹನನ್ನು) ಭೇಟಿಯಾಗಲಿರುವ ಕುರಿತು ನೀವು ಸಂಶಯ ತಾಳಬೇಡಿ (ಎಂದು ಅದರಲ್ಲಿ ಉಪದೇಶಿಸಲಾಗಿತ್ತು). ನಾವು ಅದನ್ನು (ಆ ಗ್ರಂಥವನ್ನು) ಬನೀ ಇಸ್ರಾಈಲರ ಸಂತತಿಗಳಿಗೆ ಮಾರ್ಗದರ್ಶಿಯಾಗಿಸಿದ್ದೆವು
25.ನಾವು ಅವರಿಗಿಂತ ಹಿಂದಿನ ಅದೆಷ್ಟೋ ಸಮುದಾಯಗಳನ್ನು ನಾಶ ಮಾಡಿರುವುದು, ಅವರ ಪಾಲಿಗೆ ಮಾರ್ಗದರ್ಶಿಯಾಗಲಿಲ್ಲವೇ? ಅವರ (ಹಿಂದೆ ನಾಶಗೊಂಡವರ) ನೆಲೆಗಳಲ್ಲಿ ಅವರು ನಡೆದಾಡುತ್ತಾರೆ. ಇದರಲ್ಲಿ ಖಂಡಿತ ಪುರಾವೆಗಳಿವೆ. ಅವರೇನು ಕೇಳುತ್ತಿಲ್ಲವೇ
26.ಅವರು ನೋಡಲಿಲ್ಲವೇ, ನಾವು ಒಣಗಿದ ನೆಲದ ಕಡೆಗೆ ನೀರನ್ನು ಹರಿಸುವುದನ್ನು? ಅದರಿಂದ ನಾವು ಬೆಳೆಯನ್ನು ಹೊರತೆಗೆಯುತ್ತೇವೆ. ಅದನ್ನು ಅವರ ಜಾನುವಾರುಗಳೂ ತಿನ್ನುತ್ತವೆ ಮತ್ತು ಸ್ವತಃ ಅವರೂ ತಿನ್ನುತ್ತಾರೆ. ಅವರೇನು (ಇದನ್ನೆಲ್ಲಾ) ನೋಡುತ್ತಿಲ್ಲವೇ