8.ನಾವು ಅವರ ಮುಂದೆ ಒಂದು ಗೋಡೆಯನ್ನು ಹಾಗೂ ಅವರ ಹಿಂದೆ ಒಂದು ಗೋಡೆಯನ್ನು ನಿರ್ಮಿಸಿರುವೆವು ಮತ್ತು ಅವರನ್ನು ಮುಚ್ಚಿ ಬಿಟ್ಟಿರುವೆವು. ಆದ್ದರಿಂದ ಅವರಿಗೆ ಏನೂ ಕಾಣಿಸುತ್ತಿಲ್ಲ
10.ಉಪದೇಶವನ್ನು ಅನುಸರಿಸುವ ಹಾಗೂ ಕಣ್ಣಾರೆ ಕಾಣದೆಯೇ ಆ ಅಪಾರ ದಯಾಳುವಿಗೆ (ಅಲ್ಲಾಹನಿಗೆ) ಅಂಜುತ್ತಿರುವ ವ್ಯಕ್ತಿಯನ್ನು ಮಾತ್ರ ನೀವು ಎಚ್ಚರಿಸಬಲ್ಲಿರಿ. ಅಂಥವನಿಗೆ ನೀವು ಕ್ಷಮೆ ಹಾಗೂ ಉದಾರ ಪ್ರತಿಫಲದ ಶುಭವಾರ್ತೆ ನೀಡಿರಿ
11.ಖಂಡಿತವಾಗಿಯೂ ನಾವೇ ಸತ್ತವರನ್ನು ಜೀವಂತಗೊಳಿಸುತ್ತೇವೆ ಮತ್ತು ಅವರು ಮುಂದಕ್ಕೆ ಕಳಿಸಿರುವ ಹಾಗೂ ತಮ್ಮ ಹಿಂದೆ ಬಿಟ್ಟು ಹೋಗಿರುವ ಎಲ್ಲವನ್ನೂ ನಾವು ಒಂದು ಸ್ಪಷ್ಟ ಗ್ರಂಥದಲ್ಲಿ ಎಣಿಸಿಟ್ಟಿರುವೆವು
13.ನಾವು ಅವರ ಬಳಿಗೆ ಇಬ್ಬರು ದೂತರನ್ನು ಕಳಿಸಿದಾಗ ಅವರಿಬ್ಬರನ್ನೂ ಅವರು ತಿರಸ್ಕರಿಸಿದರು. ಕೊನೆಗೆ ನಾವು ಮೂರನೆಯ ದೂತನ ಮೂಲಕ ಅವರಿಗೆ ಬಲ ಒದಗಿಸಿದೆವು. ‘‘ನಮ್ಮನ್ನು ಖಚಿತವಾಗಿ ನಿಮ್ಮೆಡೆಗೇ ರವಾನಿಸಲಾಗಿದೆ’’ ಎಂದು ಅವರು ಹೇಳಿದರು
14.ಆಗ ಅವರು (ನಾಡಿನವರು) ಹೇಳಿದರು; ನೀವು ನಮ್ಮಂತಹ ಮಾನವರು ಮಾತ್ರ. ಆ ಪರಮ ದಯಾಮಯನು (ಅಲ್ಲಾಹನು) ಏನನ್ನೂ ಇಳಿಸಿಕೊಟ್ಟಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿರುವಿರಿ
17.ಅವರು (ನಾಡಿನವರು) ಹೇಳಿದರು; ನಾವು ನಿಮ್ಮನ್ನು ಕೇವಲ ಅಪಶಕುನಗಳಾಗಿ ಕಂಡಿರುವೆವು. ನೀವು ದೂರ ನಿಲ್ಲದಿದ್ದರೆ (ಸತ್ಯಪ್ರಚಾರವನ್ನು ನಿಲ್ಲಿಸದಿದ್ದರೆ) ನಾವು ನಿಮ್ಮನ್ನು ಕಲ್ಲೆಸೆದು ಕೊಲ್ಲುವೆವು ಮತ್ತು ಖಂಡಿತವಾಗಿಯೂ ನಮ್ಮ ಕಡೆಯಿಂದ ನಿಮಗೆ ಕಠಿಣ ಶಿಕ್ಷೆ ಸಿಗುವುದು
18.ಆಗ ಅವರು (ದೂತರು) ಹೇಳಿದರು; ನಿಮ್ಮ ಅಪಶಕುನವೆಲ್ಲಾ ನಿಮ್ಮ ಜೊತೆಗೇ ಇದೆ. ನಿಮಗೆ ಬೋಧನೆ ತಲುಪಿದೆಯಲ್ಲವೇ? ನಿಜವಾಗಿ ನೀವು ಎಲ್ಲೆ ಮೀರುವವರಾಗಿದ್ದೀರಿ
22.ನಾನೇನು, ಅವನ ಹೊರತು ಇತರ ಯಾರನ್ನಾದರೂ ದೇವರಾಗಿಸಿಕೊಳ್ಳಬೇಕೆ? ನಿಜವಾಗಿ, ಆ ಪರಮ ದಯಾಳು ನನಗೇನಾದರೂ ಹಾನಿಯನ್ನುಂಟು ಮಾಡ ಬಯಸಿದರೆ, ಅವರ (ಅನ್ಯರ) ಶಿಫಾರಸ್ಸು ನನ್ನ ಯಾವ ಕೆಲಸಕ್ಕೂ ಬಾರದು ಮತ್ತು ನನ್ನನ್ನು ರಕ್ಷಿಸಲು ಅವರಿಗೆ ಸಾಧ್ಯವಾಗದು
25.(ಅವರು ಆತನನ್ನು ಕೊಂದಾಗ) ‘ಸ್ವರ್ಗವನ್ನು ಪ್ರವೇಶಿಸು’ ಎಂದು ಅವನೊಡನೆ ಹೇಳಲಾಯಿತು. ಅವನು ಹೇಳಿದನು; ‘‘ಅಯ್ಯೋ, ನನ್ನ ಜನಾಂಗದವರಿಗೆ (ಇದು) ತಿಳಿದಿದ್ದರೆ ಎಷ್ಟು ಚೆನ್ನಾಗಿತ್ತು!’’
26.‘‘ನನ್ನ ಒಡೆಯನು ನನ್ನನ್ನು ಕ್ಷಮಿಸಿರುವನು ಮತ್ತು ನನ್ನನ್ನು ಗೌರವಾನ್ವಿತರ ಸಾಲಿಗೆ ಸೇರಿಸಿರುವನೆಂಬುದು (ಅವರಿಗೆ ತಿಳಿದಿರಬೇಕಿತ್ತು)’’
27.ಆತನ (ಮರಣದ ಬಳಿಕ) ನಾವೇನೂ ಅವನ ಜನಾಂಗದ ವಿರುದ್ಧ ಆಕಾಶದಿಂದ ಯಾವುದೇ ಪಡೆಯನ್ನು ಇಳಿಸಲಿಲ್ಲ. ಇಳಿಸುವ ಅಗತ್ಯವೂ ನಮಗಿರಲಿಲ್ಲ
30.ಅವರೇನು ನೋಡಿಲ್ಲವೇ, ಅವರಿಗಿಂತ ಹಿಂದೆ ಅದೆಷ್ಟು ನಾಡುಗಳನ್ನು ನಾವು ನಾಶಗೊಳಿಸಿ ಬಿಟ್ಟಿದ್ದೇವೆಂದು? ಅವರೆಂದೂ ಅವರ ಬಳಿಗೆ ಮರಳಿ ಬರಲಾರರು
32.ನಿರ್ಜೀವ ಭೂಮಿಯು ಅವರ ಪಾಲಿಗೆ ಪುರಾವೆಯಾಗಿದೆ. ನಾವು ಅದನ್ನು ಜೀವಂತಗೊಳಿಸಿದೆವು ಹಾಗೂ ಅದರಿಂದ ಧಾನ್ಯಗಳನ್ನು ಉತ್ಪಾದಿಸಿದೆವು. ಅವುಗಳನ್ನೇ ಅವರು ತಿನ್ನುತ್ತಾರೆ
34.ಅವರು ಅದರ ಫಲಗಳನ್ನು ಉಣ್ಣಲೆಂದು (ನಾವು ಇದನ್ನೆಲ್ಲಾ ಮಾಡಿರುವೆವು). ಇದಾವುದನ್ನೂ ಅವರ ಕೈಗಳು ನಿರ್ಮಿಸಿಲ್ಲ. ಇಷ್ಟಾಗಿಯೂ ಅವರೇನು ಕೃತಜ್ಞತೆ ಸಲ್ಲಿಸುವುದಿಲ್ಲವೇ
35.ಭೂಮಿಯು ಬೆಳೆಯುವ ಎಲ್ಲ ವಸ್ತುಗಳನ್ನೂ, ಸ್ವತಃ ಅವರನ್ನೂ, ಅವರಿಗೆ ತಿಳಿದಿಲ್ಲದ (ಹಲವು) ಜೀವಿಗಳನ್ನೂ – ಎಲ್ಲವನ್ನೂ ಜೋಡಿಗಳಾಗಿ ಸೃಷ್ಟಿಸಿದವನು (ಅಲ್ಲಾಹನು), ಪಾವನನು
37.ಮತ್ತು ಸೂರ್ಯನು, ತನಗೆ ನಿಗದಿ ಪಡಿಸಲಾಗಿರುವ ದಾರಿಯಲ್ಲಿ ಚಲಿಸುತ್ತಿರುತ್ತಾನೆ. ಇದು ಆ ಪ್ರಚಂಡ, ಸರ್ವಜ್ಞನು (ಅಲ್ಲಾಹನು) ಸ್ಥಾಪಿಸಿರುವ ವ್ಯವಸ್ಥೆ
38.ಇನ್ನು ಚಂದ್ರನಿಗೆ ನಾವು ಕೆಲವು ಹಂತಗಳನ್ನು ನಿಗದಿ ಪಡಿಸಿರುವೆವು. ಎಷ್ಟೆಂದರೆ ಅದು (ಬಾಲಚಂದ್ರ) ಖರ್ಜೂರದ ಹಳೆಯ ಗೆಲ್ಲಿನಂತಾಗಿ ಬಿಡುತ್ತದೆ
39.ಚಂದ್ರನನ್ನು ಹಿಡಿಯಲು ಸೂರ್ಯನಿಗೆ ಸಾಧ್ಯವಿಲ್ಲ, ಹಗಲನ್ನು ಮೀರಿ ಬರಲು ರಾತ್ರಿಗೂ ಸಾಧ್ಯವಿಲ್ಲ. ಎಲ್ಲವೂ ಒಂದು ವೃತ್ತದಲ್ಲಿ ಚಲಿಸುತ್ತಿವೆ
42.ನಾವು ಬಯಸಿದ್ದರೆ ಅವರನ್ನು ಮುಳುಗಿಸಿ ಬಿಡಬಹುದು. ಆಗ ಅವರ ಮೊರೆ ಕೇಳುವವರು ಯಾರೂ ಇರಲಾರರು ಮತ್ತು ಅವರು ರಕ್ಷಣೆ ಪಡೆಯಲಾರರು
44.ನೀವು (ಅಲ್ಲಾಹನ) ಕೃಪೆಗೆ ಪಾತ್ರರಾಗಲು, ನಿಮ್ಮ ಮುಂದಿನ ಹಾಗೂ ನಿಮ್ಮ ಹಿಂದಿನ (ಕರ್ಮಗಳ) ಕುರಿತು ಎಚ್ಚರವಾಗಿರಿ ಎಂದು ಅವರೊಡನೆ ಹೇಳಿದಾಗಲೆಲ್ಲಾ
46.ಅಲ್ಲಾಹನು ನಿಮಗೇನನ್ನು ನೀಡಿರುವನೋ ಅದರಿಂದ, (ಸತ್ಕಾರ್ಯಕ್ಕೆ) ಖರ್ಚು ಮಾಡಿರಿ ಎಂದು ತಮ್ಮೊಡನೆ ಹೇಳಿದಾಗಲೆಲ್ಲಾ (ಅವರು ಕಡೆಗಣಿಸಿದ್ದಾರೆ). ಧಿಕ್ಕಾರಿಗಳು, ವಿಶ್ವಾಸಿಗಳೊಡನೆ ಹೇಳುತ್ತಾರೆ: ಅಲ್ಲಾಹನು ಇಚ್ಛಿಸಿದ್ದರೆ ಸ್ವತಃ ಅವನೇ ಯಾರಿಗೆ ಉಣಿಸಿ ಬಿಡುತ್ತಿದ್ದನೋ, ಅಂಥವನಿಗೇನು ನಾವು ಉಣಿಸಬೇಕೇ? ನೀವಂತು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದೀರಿ
47.ಮತ್ತು ಅವರು, ನೀವು ಸತ್ಯವಂತರಾಗಿದ್ದರೆ, ಆ ವಾಗ್ದಾನ (ಪುನರುತ್ಥಾನ) ಈಡೇರುವುದು ಯಾವಾಗ (ಎಂಬುದನ್ನು ತಿಳಿಸಿ)? ಎಂದು ಕೇಳುತ್ತಾರೆ
48.ನಿಜವಾಗಿ ಅವರು ಯಾವುದಕ್ಕಾಗಿ ಕಾಯುತ್ತಿರುವರೋ ಅದು ಹಠಾತ್ತನೆ ಬಂದೆರಗುವ ಒಂದು ಸಿಡಿಲು ಮಾತ್ರವಾಗಿರುವುದು – ಅವರು ಜಗಳಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳುವುದು
51.ಅವರು ಹೇಳುವರು: ಅಯ್ಯೋ ನಮ್ಮ ದುಸ್ಥಿತಿ! ನಮ್ಮನ್ನು ನಮ್ಮ ಗೋರಿಗಳಿಂದ ಎಬ್ಬಿಸಿದವರು ಯಾರು? ನಿಜವಾಗಿ, ಆ ಪರಮ ದಯಾಮಯನು ವಾಗ್ದಾನ ಮಾಡಿದ್ದು ಇದನ್ನೇ. ದೇವದೂತರು ಸತ್ಯವನ್ನೆ ಹೇಳಿದ್ದರು
53.ಇಂದು ಯಾರ ಮೇಲೂ ಕಿಂಚಿತ್ತೂ ಅನ್ಯಾಯವಾಗದು ಮತ್ತು ನಿಮಗೆ, ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲದ ಹೊರತು ಬೇರೇನೂ ಸಿಗದು
59.ಆದಮರ ಸಂತತಿಗಳೇ, ನಾನು ನಿಮಗೆ ಆದೇಶಿಸಿರಲಿಲ್ಲವೇ, ನೀವು ಶೈತಾನನ ಆರಾಧಕರಾಗಬೇಡಿ, ಅವನು ಖಂಡಿತ ನಿಮ್ಮ ಸ್ಪಷ್ಟ ಶತ್ರುವಾಗಿದ್ದಾನೆಂದು
64.ಇಂದು ನಾವು ಅವರ (ಧಿಕ್ಕಾರಿಗಳ) ಬಾಯಿಗಳಿಗೆ ಮುದ್ರೆ ಜಡಿದಿರುವೆವು. ನಮ್ಮೊಡನೆ ಅವರ ಕೈಗಳು ಮಾತನಾಡುವವು ಮತ್ತು ಅವರು ಏನೆಲ್ಲಾ ಮಾಡಿದ್ದರೆಂದು ಅವರ ಕಾಲುಗಳು ಸಾಕ್ಷಿ ಹೇಳುವವು
65.ನಾವು ಬಯಸಿದರೆ ಅವರ ಕಣ್ಣುಗಳನ್ನು ನುಚ್ಚು ನೂರುಗೊಳಿಸಿ ಬಿಡಬಲ್ಲೆವು. ಆ ಬಳಿಕ ಅವರು ದಾರಿಯೆಡೆಗೆ ಧಾವಿಸಲಿ. ಅವರು ಏನನ್ನು ತಾನೇ ಕಾಣಬಲ್ಲರು
66.ನಾವು ಬಯಸಿದರೆ, ಅವರು ಇರುವಲ್ಲೇ ಅವರ ರೂಪಗಳನ್ನು ವಿಕೃತಗೊಳಿಸಿ ಬಿಡಬಲ್ಲೆವು – ಆ ಬಳಿಕ ಅವರಿಗೆ ಮುಂದೆ ಹೋಗಲಿಕ್ಕೂ ಸಾಧ್ಯವಾಗದು, ಮರಳಲಿಕ್ಕೂ ಆಗದು
67.ನಾವು ಯಾರಿಗೆ ಧೀರ್ಘ ಆಯುಷ್ಯವನ್ನು ಕೊಡುತ್ತೇವೋ, ಅವರನ್ನು ರಚನೆಯಲ್ಲಿ (ದುರ್ಬಲ ಸ್ಥಿತಿಗೆ) ಮರಳಿಸಿ ಬಿಡುತ್ತೇವೆ. ಅವರೇನು ಬುದ್ದಿಯನ್ನು ಬಳಸುವುದಿಲ್ಲವೇ
68.ನಾವು ಅವರಿಗೆ (ದೂತರಿಗೆ) ಕಾವ್ಯವನ್ನು ಕಲಿಸಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶವಾಗಿದೆ ಮತ್ತು ಸ್ಪಷ್ಟವಾದ ಕುರ್ಆನ್ ಆಗಿದೆ
69.ಜೀವಂತವಿರುವ ಎಲ್ಲರನ್ನೂ ಅವರು (ದೂತರು) ಎಚ್ಚರಿಸಬೇಕೆಂದು ಹಾಗೂ ಧಿಕ್ಕಾರಿಗಳ ವಿರುದ್ಧ ಸಾಕ್ಷವು ಪೂರ್ತಿಯಾಗಲೆಂದು (ನಾವು ಇದನ್ನು ಕಳಿಸಿರುವೆವು)
71.ನಾವು ಅವುಗಳನ್ನು ಅವರಿಗೆ ವಿಧೇಯಗೊಳಿಸಿರುವೆವು. ಅವರು ಆ ಪೈಕಿ ಕೆಲವನ್ನು ಸವಾರಿಗಾಗಿ ಬಳಸಿದರೆ, ಕೆಲವನ್ನು ಆಹಾರವಾಗಿ ಬಳಸುತ್ತಾರೆ
76.ಮನುಷ್ಯನು ಕಂಡಿಲ್ಲವೇ, ನಾವು ಅವನನ್ನು ವೀರ್ಯದಿಂದ ಸೃಷ್ಟಿಸಿರುವುದನ್ನು? ಇಷ್ಟಾಗಿಯೂ ಅವನು ಸ್ಪಷ್ಟ ಜಗಳಗಂಟನಾಗಿ ಬಿಟ್ಟಿರುವನು
77.ಅವನು ನಮ್ಮ ಕುರಿತು (ಏನೇನೋ) ಹೋಲಿಕೆಗಳನ್ನು ಕಟ್ಟುತ್ತಾನೆ. ನಿಜವಾಗಿ ಅವನು ತನ್ನ ಜನನವನ್ನು ಮರೆತಿದ್ದಾನೆ. ಎಲುಬುಗಳು ಕರಗಿ ಹೋದ ಬಳಿಕ ಅವುಗಳನ್ನು ಯಾರು ತಾನೆ ಜೀವಂತಗೊಳಿಸಬಲ್ಲರು? ಎಂದು ಅವನು ಪ್ರಶ್ನಿಸುತ್ತಾನೆ
78.ಹೇಳಿರಿ; ಅವುಗಳನ್ನು ಮೊದಲ ಬಾರಿ ಸೃಷ್ಟಿಸಿದವನೇ ಅವುಗಳನ್ನು ಮತ್ತೆ ಸೃಷ್ಟಿಸುವನು. ಅವನು ಎಲ್ಲ ಬಗೆಯ ಸೃಷ್ಟಿ ಕಾರ್ಯವನ್ನು ಬಲ್ಲವನಾಗಿದ್ದಾನೆ
80.ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದವನು ಇವರಂಥವರನ್ನು ಸೃಷ್ಟಿಸಲು ಅಸಮರ್ಥನೇ? ಖಂಡಿತ ಅಲ್ಲ. ಅವನಂತು, ಎಲ್ಲವನ್ನೂ ಬಲ್ಲ, ತಜ್ಞ ಸೃಷ್ಟಿಕರ್ತನಾಗಿದ್ದಾನೆ
81.ಅವನು ಏನನ್ನಾದರೂ ಮಾಡಲು ಇಚ್ಛಿಸಿದಾಗ, ಅದಕ್ಕೆ ‘ಆಗು’ ಎಂದಷ್ಟೆ ಹೇಳುತ್ತಾನೆ ಮತ್ತು ಅಷ್ಟರಲ್ಲೇ ಅದು ಆಗಿ ಬಿಟ್ಟಿರುತ್ತದೆ
82.ಅವನು ಪಾವನನು, ಎಲ್ಲ ವಸ್ತುಗಳ ಪರಮಾಧಿಕಾರವು ಅವನ ಕೈಯಲ್ಲಿದೆ. (ಕೊನೆಗೆ) ನಿಮ್ಮೆಲ್ಲರನ್ನೂ ಅವನೆಡೆಗೇ ಮರಳಿಸಲಾಗುವುದು