10.ನೀವು ಅವರೊಡನೆ ಕೇಳಿ ನೋಡಿರಿ; ಅವರನ್ನು ಸೃಷ್ಟಿಸುವುದು ಹೆಚ್ಚು ಕಷ್ಟವೋ ಅಥವಾ ನಮ್ಮ (ಇತರ) ಸೃಷ್ಟಿಗಳನ್ನೋ? ಅವರನ್ನಂತು ನಾವು ಅಂಟುವ ಮಣ್ಣಿನಿಂದ ಸೃಷ್ಟಿಸಿರುವೆವು
21.(ಅಂದು ಮಲಕ್ಗಳೊಡನೆ ಹೇಳಲಾಗುವುದು;) ‘‘ಅಕ್ರಮಿಗಳನ್ನು, ಅವರ ಜೊತೆಗಾರರನ್ನು ಮತ್ತು ಅವರು (ಅಲ್ಲಾಹನ ಹೊರತು) ಯಾರನ್ನೆಲ್ಲಾ ಆರಾಧಿಸುತ್ತಿದ್ದರೋ ಅವರನ್ನೆಲ್ಲಾ ಒಟ್ಟು ಸೇರಿಸಿರಿ‘‘ –
27.(ಅವರು ತಮ್ಮ ನಾಯಕರೊಡನೆ) ‘‘ನೀವು ಬಲ ಭಾಗದಿಂದ ನಮ್ಮ ಬಳಿಗೆ ಬರುತ್ತಿದ್ದಿರಿ (ಸತ್ಯದಿಂದ ನಮ್ಮನ್ನು ತಡೆಯುತ್ತಿದ್ದಿರಿ)’’ ಎನ್ನುವರು
35.ಮತ್ತು ‘‘ನಾವೇನು ಒಬ್ಬ ಹುಚ್ಚು ಪೀಡಿತ ಕವಿಗಾಗಿ ನಮ್ಮ ದೇವರುಗಳನ್ನು ಬಿಟ್ಟು ಬಿಡಬೇಕೇ?’’ ಎಂದು ಅವರು ಕೆೇಳುತ್ತಿದ್ದರು
36.ನಿಜವಾಗಿ ಅವರು (ದೇವದೂತರು), ಸತ್ಯದೊಂದಿಗೆ ಬಂದಿರುತ್ತಾರೆ ಮತ್ತು ಅವರು (ಹಿಂದಿನ) ದೇವದೂತರುಗಳನ್ನು ಸಮರ್ಥಿಸುತ್ತಾರೆ
90.ಅವರು (ಇಬ್ರಾಹೀಮರು) ಅವರ (ತಮ್ಮ ಜನಾಂಗದವರ) ದೇವರುಗಳೆಡೆಗೆ (ವಿಗ್ರಹಗಳೆಡೆಗೆ) ಗಮನ ಹರಿಸಿದರು ಮತ್ತು ಕೇಳಿದರು; ‘‘ನೀವು ಏನನ್ನೂ ತಿನ್ನುವುದಿಲ್ಲವೇ?’’
96.ಅವರು (ಜನಾಂಗದವರು, ಪರಸ್ಪರರೊಡನೆ) ‘‘ಅವನಿಗಾಗಿ ಒಂದು ಅಗ್ನಿ ಕುಂಡವನ್ನು ರಚಿಸಿರಿ ಮತ್ತು ಅವನನ್ನು ಬೆಂಕಿಗೆಸೆದು ಬಿಡಿರಿ’’ ಎಂದರು
101.ಅವರು (ಇಸ್ಮಾಈಲರು) ಅವರ ಜೊತೆ ಓಡಾಡಬಲ್ಲವರಾದಾಗ ಅವರು ಹೇಳಿದರು; ‘‘ನಾನು ನಿನ್ನ ಕೊರಳು ಕೊಯ್ಯುತ್ತಿರುವುದಾಗಿ ಸ್ವಪ್ನದಲ್ಲಿ ಕಂಡಿದ್ದೇನೆ. ಈ ಕುರಿತು ನಿನ್ನ ಅನಿಸಿಕೆ ಏನು?’’ ಅವರು (ಇಸ್ಮಾಈಲ್) ಹೇಳಿದರು ; ‘‘ಅಪ್ಪಾ, ನಿಮಗೆ ಆದೇಶಿಸಲಾಗಿರುವುದನ್ನು ನೀವು ಮಾಡಿಬಿಡಿ. ಅಲ್ಲಾಹನಿಚ್ಛಿಸಿದರೆ, ನೀವು ನನ್ನನ್ನು ಸಹನಶೀಲನಾಗಿ ಕಾಣುವಿರಿ’’
102.ಹೀಗೆ ಅವರಿಬ್ಬರೂ ವಿಧೇಯತೆ ತೋರಿದರು ಮತ್ತು ಅವರು (ಇಬ್ರಾಹೀಮರು) ಅವರನ್ನು (ಪುತ್ರನನ್ನು), ಮುಖ ಕೆಳಗಾಗಿಸಿ ಮಲಗಿಸಿದರು
112.ನಾವು ಅವರಿಗೂ ಇಸ್ಹಾಕರಿಗೂ ಸಮೃದ್ಧಿಯನ್ನು ನೀಡಿದೆವು. ಅವರಿಬ್ಬರ ಸಂತತಿಗಳಲ್ಲಿ ಸಜ್ಜನರೂ ಇದ್ದರು, ಸ್ವತಃ ತಮ್ಮ ಮೇಲೆ ಸ್ಪಷ್ಟ ಅಕ್ರಮವೆಸಗಿದವರೂ ಇದ್ದಾರೆ
157.ಅವರು ಅವನ (ಅಲ್ಲಾಹನ) ಹಾಗೂ ಜಿನ್ನ್ಗಳ ನಡುವೆ ಸಂಬಂಧ ಕಲ್ಪಿಸುತ್ತಾರೆ. ತಮ್ಮನ್ನು (ನರಕದೆದುರು) ಹಾಜರುಗೊಳಿಸಲಾಗುವುದೆಂದು (ಧಿಕ್ಕಾರಿ) ಜಿನ್ನ್ಗಳಿಗೆ ಖಂಡಿತ ತಿಳಿದಿದೆ