عبدالسلام پوتیگه · ಕನ್ನಡ

1.ಖಂಡಿತವಾಗಿಯೂ ವಿಶ್ವಾಸಿಗಳಿಗೆ ಆಕಾಶಗಳಲ್ಲೂ ಭೂಮಿಯಲ್ಲೂ ಪುರಾವೆಗಳಿವೆ
3.ಹಾಗೆಯೇ, ರಾತ್ರಿ ಹಾಗೂ ಹಗಲುಗಳ ಪರಿವರ್ತನೆ ಹಾಗೂ ಅಲ್ಲಾಹನು ಆಕಾಶದಿಂದ ಇಳಿಸಿಕೊಡುವ ಆಹಾರ ಹಾಗೂ ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ನೀಡುವ ಪುನಶ್ಚೇತನ ಮತ್ತು ಗಾಳಿಯ ಚಲನೆ – (ಇವೆಲ್ಲಾ) ಬುದ್ಧಿಯುಳ್ಳವರ ಪಾಲಿಗೆ ಪುರಾವೆಗಳಾಗಿವೆ
10.ಸಮುದ್ರದಲ್ಲಿ ತನ್ನ ಆದೇಶಾನುಸಾರ ಹಡಗುಗಳು ತೇಲುವಂತೆ ಹಾಗೂ ಆ ಮೂಲಕ ನೀವು ಅವನ ಅನುಗ್ರಹವನ್ನು ಹುಡುಕುವಂತೆ, ಸಮುದ್ರವನ್ನು ನಿಮಗೆ ವಿಧೇಯಗೊಳಿಸಿರುವವನು ಅಲ್ಲಾಹನು. ನೀವು ಅವನಿಗೆ ಕೃತಜ್ಞರಾಗಬೇಕೆಂದು (ಅವನು ಇದನ್ನು ಮಾಡಿರುವನು)
14.ಇಸ್ರಾಈಲರ ಸಂತತಿಗಳಿಗೆ ನಾವು ಗ್ರಂಥವನ್ನು, ಅಧಿಕಾರವನ್ನು ಹಾಗೂ ಪ್ರವಾದಿತ್ವವನ್ನು ನೀಡಿದೆವು ಮತ್ತು ನಾವು ಅವರಿಗೆ ಶುದ್ಧ ಆಹಾರವನ್ನು ದಯಪಾಲಿಸಿದೆವು ಹಾಗೂ ಅವರಿಗೆ ಸರ್ವಲೋಕಗಳ ಇತರೆಲ್ಲರಿಗಿಂತ ಶ್ರೇಷ್ಠ ಸ್ಥಾನವನ್ನು ಕರುಣಿಸಿದೆವು
19.ಪಾಪಗಳನ್ನು ಸಂಪಾದಿಸಿದವರು, ನಾವು ಅವರನ್ನು, (ಸತ್ಯದಲ್ಲಿ) ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರಿಗೆ ಸಮಾನರಾಗಿ ಮಾಡುತ್ತೇವೆಂದು ಅವರ ಬದುಕು ಮತ್ತು ಅವರ ಸಾವು (ವಿಶ್ವಾಸಿ ಸತ್ಕರ್ಮಿಗಳಿಗೆ) ಸಮಾನವಾಗಿರುವುದೆಂದು ಭಾವಿಸಿದ್ದಾರೆಯೇ? ಅವರ ಲೆಕ್ಕಾಚಾರ ಬಹಳ ಕೆಟ್ಟದಾಗಿದೆ
21.ತನ್ನ ಸ್ವೇಚ್ಛೆಯನ್ನೇ ತನ್ನ ದೇವರಾಗಿಸಿಕೊಂಡವನನ್ನು ನೀವು ನೋಡಿದಿರಾ? ಅವನು ತಿಳುವಳಿಕೆ ಉಳ್ಳವನಾಗಿದ್ದರೂ ಅಲ್ಲಾಹನು, ಅವನನ್ನು ದಾರಿಗೆಡಿಸಿ ಬಿಟ್ಟಿರುವನು ಮತ್ತು ಅವನ ಕಿವಿ ಹಾಗೂ ಅವನ ಹೃದಯದ ಮೇಲೆ ಮುದ್ರೆ ಒತ್ತಿ ಬಿಟ್ಟಿರುವನು ಮತ್ತು ಅವನ ಕಣ್ಣಿನ ಮೇಲೆ ತೆರೆ ಎಳೆದಿರುವನು. ಅಲ್ಲಾಹನ ಬಳಿಕ ಬೇರೆ ಯಾರು ತಾನೇ ಅವನಿಗೆ ಸರಿದಾರಿ ತೋರಿಸಬಲ್ಲನು? ನೀವೇನು ಅರ್ಥ ಮಾಡಿ ಕೊಳ್ಳುವುದಿಲ್ಲವೇ
22.‘‘ನಮ್ಮ ಇಹಲೋಕದ ಬದುಕಿನ ಆಚೆ ಬೇರೇನೂ ಇಲ್ಲ. ನಾವು ಸಾಯುತ್ತೇವೆ ಮತ್ತು ನಾವು ಬದುಕುತ್ತೇವೆ. ನಮ್ಮನ್ನು ನಾಶ ಮಾಡುವುದು ಕಾಲ ಮಾತ್ರ’’ ಎಂದು ಅವರು ಹೇಳುತ್ತಾರೆ. ನಿಜವಾಗಿ ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ ಅವರು ಕೇವಲ ಊಹಿಸುತ್ತಿದ್ದಾರೆ
24.ಹೇಳಿರಿ; ಅಲ್ಲಾಹನೇ ನಿಮ್ಮನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ನಿಮ್ಮನ್ನು ಸಾಯಿಸುತ್ತಾನೆ. ಆ ಬಳಿಕ ನಿಸ್ಸಂದೇಹವಾಗಿ ಬರಲಿರುವ ಪುನರುತ್ಥಾನದ ದಿನ ಅವನೇ ನಿಮ್ಮನ್ನು ಒಟ್ಟು ಸೇರಿಸಲಿದ್ದಾನೆ. ಆದರೆ ಹೆಚ್ಚಿನ ಮಾನವರಿಗೆ ಅರಿವಿಲ್ಲ
26.ಅಂದು ನೀವು, ಎಲ್ಲ ಸಮುದಾಯಗಳು ಮೊಣಕಾಲೂರಿ ಬಿದ್ದಿರುವುದನ್ನು ಕಾಣುವಿರಿ. (ಅಂದು) ಪ್ರತಿಯೊಂದು ಸಮುದಾಯವನ್ನೂ ಅದರ ಕರ್ಮಗಳ ದಾಖಲೆಯ ಕಡೆಗೆ ಕರೆಯಲಾಗುವುದು. (ಮತ್ತು ಹೇಳಲಾಗುವುದು;) ಇಂದು ನಿಮಗೆ ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲ ಸಿಗಲಿದೆ
30.‘‘ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ ಮತ್ತು ಅಂತಿಮ ಕ್ಷಣವು ಬರುವುದರಲ್ಲಿ ಸಂದೇಹವಿಲ್ಲ ಎಂದು (ನಿಮ್ಮಾಡನೆ) ಹೇಳಲಾದಾಗ ನೀವು, – ಅಂತಿಮ ಘಳಿಗೆ ಅಂದರೇನೆಂದು ನಮಗೇನೂ ತಿಳಿಯದು, ನಾವು ಅದನ್ನು ಕೇವಲ ಒಂದು ಭ್ರಮೆ ಎಂದು ಪರಿಗಣಿಸುತ್ತೇವೆ ಮತ್ತು ನಾವಂತು ನಂಬುವವರಲ್ಲ – ಎನ್ನುತ್ತಿದ್ದಿರಿ’’
33.‘‘ಇದೇಕೆಂದರೆ, ನೀವು ಅಲ್ಲಾಹನ ವಚನಗಳನ್ನು ಗೇಲಿ ಮಾಡುತ್ತಿದ್ದಿರಿ ಮತ್ತು ಇಹಲೋಕದ ಬದುಕು ನಿಮ್ಮನ್ನು ಮೋಸಗೊಳಿಸಿತ್ತು’’. ಇಂದು ಅವರಿಗೆ ಇಲ್ಲಿಂದ ಹೊರ ಹೋಗಲಿಕ್ಕೂ ಸಾಧ್ಯವಿಲ್ಲ ಮತ್ತು ಅವನನ್ನು (ಅಲ್ಲಾಹನನ್ನು) ಮೆಚ್ಚಿಸಲಿಕ್ಕೂ ಅವಕಾಶವಿಲ್ಲ