عبدالسلام پوتیگه · ಕನ್ನಡ

1.(ಸತ್ಯವನ್ನು) ಧಿಕ್ಕರಿಸಿದವರ ಹಾಗೂ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರ ಕರ್ಮಗಳೆಲ್ಲಾ ವ್ಯರ್ಥವಾಗಿ ಬಿಟ್ಟವು
2.ಮತ್ತು ಸತ್ಯದಲ್ಲಿ ನಂಬಿಕೆ ಇಟ್ಟು ಸತ್ಕರ್ಮಗಳನ್ನು ಮಾಡಿದವರು ಹಾಗೂ ಮುಹಮ್ಮದರಿಗೆ ಇಳಿಸಿ ಕೊಡಲಾಗಿರುವ ಸಂದೇಶವು ತಮ್ಮ ಒಡೆಯನ ಕಡೆಯಿಂದ (ಬಂದ) ಸತ್ಯವೆಂದು ನಂಬಿದವರು – ಅವರ ಪಾಪಗಳನ್ನು ಅವನು (ಅಲ್ಲಾಹನು) ಪರಿಹರಿಸಿದನು ಮತ್ತು ಅವರ ಸ್ಥಿತಿಯನ್ನು ಸುಧಾರಿಸಿದನು
4.(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು
12.ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರನ್ನು ಅಲ್ಲಾಹನು ಖಂಡಿತವಾಗಿಯೂ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳೊಳಗೆ ಸೇರಿಸುವನು. ಧಿಕ್ಕಾರಿಗಳು ಮೋಜು ಮಾಡುತ್ತಿದ್ದಾರೆ ಮತ್ತು ಜಾನುವಾರುಗಳು ತಿಂದಂತೆ ತಿನ್ನುತ್ತಿದ್ದಾರೆ. ನರಕವೇ ಅವರ ನೆಲೆಯಾಗಿರುವುದು
15.ಧರ್ಮನಿಷ್ಠರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು (ಹೀಗಿರುತ್ತದೆ); ಅದರಲ್ಲಿ ಎಂದೂ ಮಲಿನವಾಗದ ನೀರಿರುವ ನದಿಗಳಿರುವವು ಹಾಗೂ ರುಚಿ ಬದಲಾಗದ ಹಾಲಿನ ನದಿಗಳು, ಕುಡಿಯುವವರಿಗೆ ತುಂಬಾ ಸ್ವಾದಿಷ್ಟವಾಗಿರುವ ಮದಿರೆಯ ನದಿಗಳು ಮತ್ತು ಶುದ್ಧ ಜೇನಿನ ನದಿಗಳಿರುವವು. ಅಲ್ಲಿ ಅವರಿಗಾಗಿ ಎಲ್ಲ ಬಗೆಯ ಫಲಗಳಿರುವವು ಮತ್ತು ಅವರ ಒಡೆಯನ ಕಡೆಯಿಂದ ಕ್ಷಮಾದಾನ ಸಿಗುವುದು. ಇಂಥವರು (ಸ್ವರ್ಗವಾಸಿಗಳು), ಸದಾಕಾಲ ನರಕದಲ್ಲೇ ಇರುವ ಹಾಗೂ ಕರುಳುಗಳನ್ನು ಚೂರು ಚೂರಾಗಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವ ವ್ಯಕ್ತಿಗೆ ಸಮನಾಗಬಲ್ಲರೇ
16.(ದೂತರೇ,) ಅವರಲ್ಲಿ ಕೆಲವರು, ನಿಮ್ಮ ಮಾತನ್ನು ಆಲಿಸುತ್ತಾರೆ. ತರುವಾಯ ನಿಮ್ಮ ಬಳಿಯಿಂದ ಹೊರಟು ಹೋದ ಬಳಿಕ, ಜ್ಞಾನ ನೀಡಲಾಗಿರುವವರೊಡನೆ, (ಏನನ್ನೂ ಕೇಳದವರಂತೆ) ‘‘ಆತ ಈಗ ತಾನೇ ಹೇಳಿದ್ದೇನನ್ನು?’’ ಎಂದು ಕೇಳುತ್ತಾರೆ. ಅಲ್ಲಾಹನು ಅಂಥವರ ಮನಸ್ಸುಗಳಿಗೆ ಮುದ್ರೆ ಒತ್ತಿರುತ್ತಾನೆ ಮತ್ತು ಅವರು ತಮ್ಮ ಸ್ವೇಚ್ಛೆಯನ್ನೇ ಅನುಸರಿಸುತ್ತಾರೆ
19.ನಿಮಗೆ ತಿಳಿದಿರಲಿ. ಆ ಅಲ್ಲಾಹನ ಹೊರತು ಬೇರೆ ದೇವರಿಲ್ಲ. ನೀವು ನಿಮ್ಮ ಹಾಗೂ ಎಲ್ಲ ವಿಶ್ವಾಸಿ ಪುರುಷರ ಹಾಗೂ ವಿಶ್ವಾಸಿ ಸ್ತ್ರೀಯರ ಪರವಾಗಿ ಕ್ಷಮೆ ಬೇಡಿರಿ. ನೀವು ನಡೆದಾಡುವ ಸ್ಥಳಗಳನ್ನೂ ನೀವು ವಿರಮಿಸುವ ಸ್ಥಳಗಳನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು
20.(ದೂತರೇ,) ವಿಶ್ವಾಸಿಗಳಾದವರು, ಒಂದು ಅಧ್ಯಾಯವನ್ನೇಕೆ ಇಳಿಸಲಾಗಿಲ್ಲ ಎಂದು ಕೇಳುತ್ತಾರೆ. ಕೊನೆಗೆ, ಬಹಳ ಸ್ಪಷ್ಟ ಆದೇಶವಿರುವ ಹಾಗೂ ಯುದ್ಧದ ಪ್ರಸ್ತಾಪವಿರುವ ಒಂದು ಅಧ್ಯಾಯವನ್ನು ಇಳಿಸಲಾದಾಗ, ಮನದಲ್ಲಿ ರೋಗವಿರುವವರು, ಮಾರಣಾಂತಿಕ ಮೂರ್ಛೆಗೊಳಗಾದವರು ನೋಡುವಂತೆ ನಿಮ್ಮತ್ತ ನೋಡ ತೊಡಗುತ್ತಾರೆ. ಅವರಿಗೆ ವಿನಾಶ ಕಾದಿದೆ
32.ಸನ್ಮಾರ್ಗವು ತಮಗೆ ಸ್ಪಷ್ಟವಾದ ಬಳಿಕ (ಅದನ್ನು) ಧಿಕ್ಕರಿಸಿದವರು, ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರು ಮತ್ತು ದೂತರನ್ನು ವಿರೋಧಿಸಿದವರು, ಅಲ್ಲಾಹನಿಗೆ ಖಂಡಿತ ಯಾವ ಹಾನಿಯನ್ನೂ ಮಾಡಲಾರರು. ಅವನು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು
38.ಹೌದು ನೀವು ಅಂಥವರು. ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರೆಂದು ನಿಮಗೆ ಕರೆ ನೀಡಲಾದಾಗ, ನಿಮ್ಮಲ್ಲಿ ಕೆಲವರು ಜಿಪುಣತೆ ತೋರುತ್ತಾರೆ. ನಿಜವಾಗಿ ಜಿಪುಣತೆ ತೋರುವವನು ಸ್ವತಃ ತನ್ನ ವಿರುದ್ಧವೇ ಜಿಪುಣತೆ ತೋರುತ್ತಾನೆ. ಅಲ್ಲಾಹನಂತು ಸಂಪನ್ನನಾಗಿದ್ದಾನೆ ಮತ್ತು ನೀವು ಬಡವರು. ನೀವು ಮುಖ ತಿರುಗಿಸಿಕೊಂಡರೆ, ಅವನು ನಿಮ್ಮ ಬದಲಿಗೆ ಬೇರೊಂದು ಸಮುದಾಯವನ್ನು ಮುಂದೆ ತರುವನು. ಅವರು ನಿಮ್ಮಂತಿರಲಾರರು