17.ಇದರೊಳಗೆ ಪ್ರವೇಶಿಸಿರಿ. ನೀವಿನ್ನು ಸಹನೆ ತೋರಿದರೂ ಸಹನೆ ತೋರದಿದ್ದರೂ ನಿಮ್ಮ ಪಾಲಿಗೆ ಸಮಾನವಾಗಿರುತ್ತದೆ. ನಿಮಗಂತು, ನೀವು ಮಾಡುತ್ತಿದ್ದ ಕೃತ್ಯಗಳ ಪ್ರತಿಫಲವನ್ನಷ್ಟೇ ನೀಡಲಾಗುತ್ತಿದೆ
19.ತಮಗೆ ತಮ್ಮ ಒಡೆಯನು ನೀಡಿದ್ದರಲ್ಲಿ ಸಂತುಷ್ಟರಾಗಿರುವರು. ಮತ್ತು ಅವರನ್ನು ಅವರ ಒಡೆಯನು ನರಕದ ಹಿಂಸೆಯಿಂದ ಸುರಕ್ಷಿತರಾಗಿಟ್ಟಿರುವನು
21.ಅವರು ಸಾಲು ಸಾಲಾಗಿ ದಿಂಬುಗಳಿಗೆ ಒರಗಿ ವಿರಮಿಸುತ್ತಿರುವರು ಮತ್ತು ನಾವು ವಿಶಾಲ ಕಣ್ಣಿನ ‘ಹೂರ್’ಗಳನ್ನು ಅವರ ಜೊತೆಗಳಾಗಿಸಿರುವೆವು
22.ವಿಶ್ವಾಸಿಗಳಾಗಿದ್ದವರು ಮತ್ತು ವಿಶ್ವಾಸಿಗಳಾಗಿ ಅವರನ್ನು ಅನುಸರಿಸಿದ, ಅವರ ಸಂತತಿಗಳು – ಅವರನ್ನು ನಾವು ಅವರ ಸಂತತಿಗಳೊಂದಿಗೆ ಸೇರಿಸಿರುವೆವು – ಮತ್ತು ನಾವು ಅವರ ಕರ್ಮಗಳಲ್ಲಿ ಏನನ್ನೂ ಕಡಿತಗೊಳಿಸಲಾರೆವು. ಪ್ರತಿಯೊಬ್ಬನೂ ತನ್ನ ಕರ್ಮಗಳಿಗೆ ಪ್ರತಿಯಾಗಿ ಒತ್ತೆಯಾಳಾಗಿದ್ದಾನೆ
24.ಅಲ್ಲಿ ಅವರು (ಮೋಜಿಗಾಗಿ) ಪಾನಪಾತ್ರೆಗಳನ್ನು ಎಳೆದಾಡುವರು. ಯಾವುದೇ ಅನಗತ್ಯದ ಸಂಭಾಷಣೆಯಾಗಲಿ, ಪಾಪದ ಮಾತಾಗಲಿ ಅಲ್ಲಿ ಇರಲಾರದು
29.ನಾವು ಈ ಹಿಂದೆ ಅವನನ್ನೇ ಕರೆದು ಪ್ರಾರ್ಥಿಸುತ್ತಿದ್ದೆವು. ಖಂಡಿತವಾಗಿಯೂ ಅವನು ಮಹಾ ಉಪಕಾರಿ ಹಾಗೂ ಕರುಣಾಮಯಿಯಾಗಿದ್ದಾನೆ
31.‘‘ಅವನೊಬ್ಬ ಕವಿ. ಅವನು ಕಾಲದ ಪ್ರಹಾರಕ್ಕೆ ತುತ್ತಾಗುವುದನ್ನು ಕಾಣಲು ನಾವು ಕಾಯುತ್ತಿದ್ದೇವೆ’’ ಎಂದು ಅವರು ಹೇಳುತ್ತಿದ್ದಾರೆಯೇ
34.‘‘ಅವನು ಇದನ್ನು (ಕುರ್ಆನನ್ನು) ತಾನೇ ರಚಿಸಿಕೊಂಡಿದ್ದಾನೆ’’ ಎಂದವರು ಹೇಳುತ್ತಿದ್ದಾರೆಯೇ? ನಿಜವಾಗಿ ಅವರು ನಂಬುತ್ತಿಲ್ಲ
39.ಅವರ ಬಳಿಯೇನು ಏಣಿ ಇದೆಯೇ? ಅವರೇನು ಅದರ ಮೇಲೇರಿ (ಆಕಾಶ ಲೋಕದ ಸಮಾಚಾರಗಳಿಗೆ) ಕಿವಿ ಗೊಡುತ್ತಿದ್ದಾರೆಯೇ? ಹಾಗಾದರೆ (ಆ ರೀತಿ) ಕಿವಿ ಗೊಡುವ ಅವರ ವ್ಯಕ್ತಿಯು ಸ್ಪಷ್ಟವಾದ ಪುರಾವೆಯನ್ನು ತರಲಿ
41.(ದೂತರೇ,) ನೀವೇನು ಅವರಿಂದ ಏನಾದರೂ ಪ್ರತಿಫಲವನ್ನು ಅಪೇಕ್ಷಿಸಿರುವಿರಾ ಮತ್ತು ಅವರು ತಲೆದಂಡದ ಭಾರದಡಿ ನರಳುತ್ತಿರುವರೇ
44.ಅವರಿಗೇನು ಅಲ್ಲಾಹನ ಹೊರತು ಬೇರೆ ದೇವರಿದ್ದಾನೆಯೇ? ಅಲ್ಲಾಹನಂತು, ಅವರು ಪಾಲುಗೊಳಿಸುವ ಎಲ್ಲವುಗಳಿಂದ ಮುಕ್ತನಾಗಿದ್ದಾನೆ
48.ಮತ್ತು ಅಕ್ರಮಿಗಳಿಗೆ ಇದಲ್ಲದೆ ಇನ್ನೂ ಹೆಚ್ಚಿನ ಶಿಕ್ಷೆಯೂ ಖಂಡಿತ ಸಿಗುವುದು. ಅದರೆ ಅವರಲ್ಲಿ ಹೆಚ್ಚಿನವರು ತಿಳಿದಿಲ್ಲ
49.(ದೂತರೇ,) ನೀವು ನಿಮ್ಮ ಪ್ರಭುವಿನ ಆದೇಶದಂತೆ ಸಹನಶೀಲರಾಗಿರಿ. ನೀವು ಖಂಡಿತ ನಮ್ಮ ಕಣ್ಣ ಮುಂದಿರುವಿರಿ. ನೀವು ಎದ್ದೇಳುವಾಗ, ನಿಮ್ಮ ಒಡೆಯನ ಪಾವಿತ್ರವನ್ನು ಜಪಿಸಿರಿ