24.ನಿಜವಾಗಿ ಅವೆಲ್ಲಾ ಕೇವಲ ನೀವು ಮತ್ತು ನಿಮ್ಮ ಪೂರ್ವಜರು ಇಟ್ಟು ಬಿಟ್ಟಿರುವ ಕೆಲವು ಹೆಸರುಗಳು ಮಾತ್ರ. ಅದರ ಪರವಾಗಿ ಅಲ್ಲಾಹನು ಯಾವ ಪುರಾವೆಯನ್ನೂ ಇಳಿಸಿ ಕೊಟ್ಟಿಲ್ಲ. ಅವರು ಕೇವಲ ತಮ್ಮ ಊಹೆಯನ್ನು ಹಾಗೂ ಸ್ವೇಚ್ಛೆಯನ್ನು ಮಾತ್ರವೇ ಅನುಸರಿಸುತ್ತಿದ್ದಾರೆ. ಇದೀಗ ಅವರ ಬಳಿಗೆ ಅವರ ಒಡೆಯನ ಕಡೆಯಿಂದ ಮಾರ್ಗದರ್ಶನವು ಬಂದಿದೆ
27.ಆಕಾಶಗಳಲ್ಲಿ ಅದೆಷ್ಟೋ ‘ಮಲಕ್’ಗಳಿದ್ದಾರೆ. ಅವರ ಶಿಫಾರಸ್ಸಿನಿಂದ ಯಾವ ಲಾಭವೂ ಆಗುವುದಿಲ್ಲ – ತಾನಿಚ್ಛಿಸುವವನ ಪರವಾಗಿ ಅಲ್ಲಾಹನು ಅನುಮತಿ ನೀಡುವ ಹಾಗೂ ಅವನು ಇಷ್ಟ ಪಡುವ ಮುನ್ನ
29.ಅವರಿಗೆ ಆ ಕುರಿತು ಯಾವ ಜ್ಞಾನವೂ ಇಲ್ಲ. ಅವರು ಕೇವಲ ಊಹೆಯನ್ನಷ್ಟೇ ಅನುಸರಿಸುತ್ತಿದ್ದಾರೆ. ಮತ್ತು ಊಹೆಯು ಸತ್ಯಕ್ಕೆ ಕಿಂಚಿತ್ತೂ ಪರ್ಯಾಯವಲ್ಲ
31.ಅದುವೇ ಅವರ ಜ್ಞಾನದ ಮಿತಿಯಾಗಿದೆ. ಖಂಡಿತವಾಗಿಯೂ ನಿಮ್ಮ ಒಡೆಯನು – ತನ್ನ ಮಾರ್ಗದಿಂದ ದೂರ ಸರಿದಿರುವವನು ಯಾರೆಂಬುದನ್ನು ಚೆನ್ನಾಗಿ ಬಲ್ಲನು ಮತ್ತು ಸರಿದಾರಿಯಲ್ಲಿರುವವನು ಯಾರೆಂಬುದನ್ನೂ ಅವನು ಚೆನ್ನಾಗಿ ಬಲ್ಲನು
32.ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನಿಗೇ ಸೇರಿವೆ. ಕೆಟ್ಟ ಕರ್ಮಗಳನ್ನು ಮಾಡಿದವರಿಗೆ ಅವನು ಅವರ ಕರ್ಮಕ್ಕನುಸಾರವಾದ ಪ್ರತಿಫಲವನ್ನು ನೀಡುವನು ಮತ್ತು ಸತ್ಕರ್ಮಗಳನ್ನು ಮಾಡಿದವರಿಗೆ ಸತ್ಫಲವನ್ನು ನೀಡುವನು
33.ಅವರು (ಸತ್ಕರ್ಮಿಗಳು), ಸಣ್ಣ ಪುಟ್ಟ ಪ್ರಮಾದಗಳ ಹೊರತು, ಎಲ್ಲ ದೊಡ್ಡ ಪಾಪಕೃತ್ಯಗಳಿಂದ ಹಾಗೂ ಅಶ್ಲೀಲ ಕಾರ್ಯಗಳಿಂದ ದೂರ ಉಳಿಯುತ್ತಾರೆ. ಖಂಡಿತವಾಗಿಯೂ ನಿಮ್ಮೊಡೆಯನು ವಿಶಾಲ ಕ್ಷಮಾ ಗುಣ ಉಳ್ಳವನಾಗಿದ್ದಾನೆ. ಅವನಂತೂ, ತಾನು ನಿಮ್ಮನ್ನು ಭೂಮಿಯಿಂದ ಹುಟ್ಟಿಸಿದಾಗಲೂ, ನೀವು ನಿಮ್ಮ ತಾಯಂದಿರ ಹೊಟ್ಟೆಗಳೊಳಗೆ ಪುಟ್ಟ ಮಕ್ಕಳಾಗಿದ್ದಾಗಲೂ ನಿಮ್ಮನ್ನು ಚೆನ್ನಾಗಿ ಬಲ್ಲನು. ನೀವು ನಿಮ್ಮ ಪಾವಿತ್ರದ ಕುರಿತು ಕೊಚ್ಚಿಕೊಳ್ಳಬೇಡಿ. ಧರ್ಮನಿಷ್ಠನು ಯಾರೆಂಬುದನ್ನು ಅವನು ಚೆನ್ನಾಗಿ ಬಲ್ಲನು
53.ಈ ಹಿಂದೆ ನೂಹರ ಜನಾಂಗವನ್ನು (ಅವನು ನಾಶಮಾಡಿದ್ದನು). ಖಂಡಿತವಾಗಿಯೂ ಅವರು ತುಂಬಾ ಅಕ್ರಮಿಗಳಾಗಿದ್ದರು ಹಾಗೂ ವಿದ್ರೋಹಿಗಳಾಗಿದ್ದರು