عبدالسلام پوتیگه · ಕನ್ನಡ

1.ವಿಶ್ವಾಸಿಗಳೇ, ಅಲ್ಲಾಹನ ಕೋಪಕ್ಕೆ ತುತ್ತಾಗುವವರನ್ನು ನಿಮ್ಮ ಆಪ್ತರಾಗಿಸಿಕೊಳ್ಳಬೇಡಿ. ಧಿಕ್ಕಾರಿಗಳು, ಗೋರಿಗಳಲ್ಲಿರುವವರ (ಮರು ಜೀವನದ) ಕುರಿತು ನಿರಾಶರಾಗಿರುವಂತೆಯೇ, ಅವರು (ಅಲ್ಲಾಹನ ಕೋಪಕ್ಕೆ ಪಾತ್ರರಾದವರು) ಪರಲೋಕದ ಕುರಿತು ನಿರಾಶರಾಗಿರುವರು
6.ನನ್ನ ಜನಾಂಗದವರೇ, ನಾನು ನಿಮ್ಮೆಡೆಗೆ ಬಂದಿರುವ, ಅಲ್ಲಾಹನ ದೂತನೆಂಬುದನ್ನು ಅರಿತಿದ್ದೂ ನೀವೇಕೆ ನನ್ನನ್ನು ಹಿಂಸಿಸುತ್ತಿರುವಿರಿ? ಎಂದು ಮೂಸಾ ತಮ್ಮ ಜನಾಂಗದವರೊಡನೆ ಕೇಳಿದರು. ಅವರು (ಮೂಸಾರ ಜನಾಂಗದವರು) ವಕ್ರ ಬುದ್ಧಿ ತೋರಿದಾಗ ಅಲ್ಲಾಹನು ಅವರ ಮನಸ್ಸುಗಳನ್ನು ವಕ್ರಗೊಳಿಸಿಬಿಟ್ಟನು. ಅಲ್ಲಾಹನು ಅವಿಧೇಯರಿಗೆ ಸರಿದಾರಿಯನ್ನು ತೋರಿಸುವುದಿಲ್ಲ
7.‘‘ಇಸ್ರಾಈಲರ ಸಂತತಿಗಳೇ, ನಾನು ನಿಮ್ಮ ಬಳಿಗೆ ಅಲ್ಲಾಹನ ದೂತನಾಗಿ ಬಂದಿರುತ್ತೇನೆ. ನಿಮ್ಮ ಬಳಿ ಈಗಾಗಲೇ ಇರುವ ತೌರಾತನ್ನು ನಾನು ಸಮರ್ಥಿಸುತ್ತೇನೆ. ಮತ್ತು ನಾನು, ನನ್ನ ಬಳಿಕ ಬರಲಿರುವ ಅಹ್ಮದ್ ಎಂಬ ಹೆಸರಿನ ದೂತರ ಕುರಿತು ಶುಭವಾರ್ತೆ ನೀಡುವವನಾಗಿರುತ್ತೇನೆ’’ ಎಂದು ಮರ್ಯಮರ ಪುತ್ರ ಈಸಾ ಹೇಳಿದ್ದರು. ಕೊನೆಗೆ ಅವರು (ಆ ದೂತರು) ಸ್ಪಷ್ಟ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಇದೆಲ್ಲಾ ಸ್ಪಷ್ಟ ಮಾಟಗಾರಿಕೆಯಾಗಿದೆ ಎಂದು ಬಿಟ್ಟರು
13.ಆಗ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗತೋಟಗಳೊಳಗೆ ನಿಮ್ಮನ್ನು ಸೇರಿಸುವನು. ಮತ್ತು ಶಾಶ್ವತವಾದ ಆ ಸ್ವರ್ಗತೋಟಗಳಲ್ಲಿ (ನಿಮಗೆ) ನಿವಾಸಗಳನ್ನು ಒದಗಿಸುವನು. ಇದುವೇ ಮಹಾ ವಿಜಯವಾಗಿದೆ