عبدالسلام پوتیگه · ಕನ್ನಡ

1.ವಿಶ್ವಾಸಿಗಳೇ, ನೀವು ಅಲ್ಲಾಹನ ಸಹಾಯಕರಾಗಿರಿ – ಮರ್ಯಮರ ಪುತ್ರ ಈಸಾ ತಮ್ಮ ಆಪ್ತ ಶಿಷ್ಯರೊಡನೆ ‘‘ಅಲ್ಲಾಹನ ಮಾರ್ಗದಲ್ಲಿ ನನಗೆ ನೆರವಾಗುವವರು ಯಾರಿದ್ದಾರೆ?’’ ಎಂದಂತೆ. ಅವರ ಆಪ್ತ ಶಿಷ್ಯರು ‘‘ನಾವು ಅಲ್ಲಾಹನ ಸಹಾಯಕರು’’ ಎಂದರು. ಆ ಬಳಿಕ ಇಸ್ರಾಈಲರ ಸಂತತಿಯಲ್ಲಿನ ಒಂದು ಗುಂಪು ವಿಶ್ವಾಸವಿಟ್ಟಿತು ಮತ್ತು ಇನ್ನೊಂದು ಗುಂಪು ಧಿಕ್ಕರಿಸಿತು. ನಾವು ವಿಶ್ವಾಸಿಗಳಿಗೆ ಅವರ ಶತ್ರುಗಳ ವಿರುದ್ದ ನೆರವು ಒದಗಿಸಿದೆವು ಮತ್ತು ಅವರು ವಿಜಯಿಗಳಾದರು
3.ಅವನೇ ನಿರಕ್ಷರಿಗಳ ಮಧ್ಯೆ, ಅವರಲ್ಲೊಬ್ಬನನ್ನು ದೂತನಾಗಿ ಕಳುಹಿಸಿದನು. ಅವರು (ಆ ದೂತರು) ಅವರಿಗೆ ಆತನ ವಚನಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ಅವರನ್ನು ಸಂಸ್ಕರಿಸುತ್ತಾರೆ ಮತ್ತು ಅವರಿಗೆ ಗ್ರಂಥವನ್ನೂ ಯುಕ್ತಿಯನ್ನೂ ಕಲಿಸಿಕೊಡುತ್ತಾರೆ. ಈ ಹಿಂದೆ ಆ ಜನರು ಸ್ಪಷ್ಟವಾಗಿ ದಾರಿಗೆಟ್ಟಿದ್ದರು
6.ತೌರಾತಿನ ಹೊಣೆ ವಹಿಸಿ ಕೊಡಲಾದವರು ಮತ್ತು ಆ ಹೊಣೆಯನ್ನು ನಿರ್ವಹಿಸದೆ ಇದ್ದವರ ಉದಾಹರಣೆಯು ಗ್ರಂಥಗಳ ಹೊರೆ ಹೊತ್ತ ಕತ್ತೆಯಂತಿದೆ. ಅಲ್ಲಾಹನ ವಚನಗಳನ್ನು ತಿರಸ್ಕರಿಸಿದವರ ಸ್ಥಿತಿಯು ನಿಜಕ್ಕೂ ಕೆಟ್ಟದಾಗಿದೆ. ಅಲ್ಲಾಹನು ಅಕ್ರಮಿಗಳಿಗೆ ಸರಿದಾರಿಯನ್ನು ತೋರುವುದಿಲ್ಲ
9.ಹೇಳಿರಿ; ನೀವು ಯಾವ ಮರಣದಿಂದ ದೂರ ಓಡುತ್ತಿರುವಿರೊ ಅದು ಖಂಡಿತ ನಿಮ್ಮ ಮುಂದೆ ಬರಲಿದೆ. ಆ ಬಳಿಕ ನಿಮ್ಮನ್ನು, ಗುಪ್ತ ಹಾಗೂ ಬಹಿರಂಗವಾದ ಎಲ್ಲವನ್ನೂ ಬಲ್ಲವನ ಬಳಿಗೆ ಮರಳಿಸಲಾಗುವುದು. ನೀವು ಏನೆಲ್ಲಾ ಮಾಡುತ್ತಿದ್ದಿರೆಂಬುದನ್ನು ಆಗ ಅವನು ನಿಮಗೆ ತಿಳಿಸುವನು