1.ಹೇಳಿರಿ; ನೀವು ಚಿಂತಿಸಿ ನೋಡಿದಿರಾ? ನೀವು ಬಳಸುವ ನೀರು ಇಂಗಿ ಹೋದರೆ ಯಾರಿದ್ದಾರೆ, ನಿಮಗೆ ಸಿಹಿ ನೀರಿನ ಚಿಲುಮೆಗಳನ್ನು ತಂದು ಕೊಡುವವರು
8.ತನ್ನ ದಾರಿಯಿಂದ ದೂರ ಸರಿದವನು ಯಾರೆಂಬುದನ್ನು ಚೆನ್ನಾಗಿ ಬಲ್ಲವನು ಆ ನಿಮ್ಮ ಒಡೆಯನು. ಯಾರು ಸರಿ ದಾರಿಯಲ್ಲಿದ್ದಾರೆ ಎಂಬುದನ್ನೂ ಅವನೇ ಬಲ್ಲನು
18.ಹಿಂದೆ ತೋಟದವರನ್ನು ಪರೀಕ್ಷಿಸಿದಂತೆ ನಾವು ಅವರನ್ನು ಪರೀಕ್ಷಿಸಿದ್ದೇವಷ್ಟೆ. ‘‘ನಾವು ಅದರ (ಆ ತೋಟದ) ಬೆಳೆಯನ್ನು ನಾಳೆ ಮುಂಜಾನೆ ಖಂಡಿತ ಕೊಯ್ಯುವೆವು’’ ಎಂದು ಅವರು ಪ್ರಮಾಣ ಮಾಡಿ ಘೋಷಿಸಿದ್ದರು
29.ಅವರಲ್ಲಿನ ಸಂತುಲಿತ ವ್ಯಕ್ತಿಯೊಬ್ಬನು ಹೇಳಿದನು; ‘‘(ಹೀಗಾದೀತೆಂದು) ನಾನು ನಿಮಗೆ ಹೇಳಿರಲಿಲ್ಲವೇ? ನೀವೇಕೆ (ಅಲ್ಲಾಹನ) ಪಾವಿತ್ರವನ್ನು ಜಪಿಸುವುದಿಲ್ಲ?’’
34.ಹೀಗಿರುತ್ತದೆ, ನಮ್ಮ ಶಿಕ್ಷೆ. ಪರಲೋಕದ ಶಿಕ್ಷೆಯಂತೂ ಇದಕ್ಕಿಂತ ಹಿರಿದಾಗಿರುತ್ತದೆ. ಅದನ್ನು ಅವರು ಅರಿತಿದ್ದರೆ ಚೆನ್ನಾಗಿತ್ತು
40.ಅಥವಾ ನೀವು ತೀರ್ಮಾನಿಸಿದ್ದನ್ನೆಲ್ಲಾ ನಾವು ನಿಮಗೆ ಕೊಟ್ಟು ಬಿಡಬೇಕೆಂದು, ಪುನರುತ್ಥಾನದ ದಿನದವರೆಗೂ ನಾವು ಪಾಲಿಸಲೇ ಬೇಕಾದ ಕರಾರನ್ನು ನೀವು ನಮ್ಮಿಂದ ಪಡೆದಿರುವಿರಾ
43.ಹಾಲಾಹಲ ಮೆರೆದಿರುವ (ಪುನರುತ್ಥಾನದ) ದಿನ, ಸಾಷ್ಟಾಂಗವೆರಗಲು ಅವರನ್ನು ಕರೆಯಲಾಗುವುದು. ಆದರೆ ಅವರಿಗೆ ಅದು ಸಾಧ್ಯವಾಗದು
44.ಭಯದಿಂದ ಅವರ ದೃಷ್ಟಿಗಳು ತಗ್ಗಿರುವವು ಮತ್ತು ಅಪಮಾನವು ಅವರನ್ನು ಆವರಿಸಿರುವುದು. ಈ ಹಿಂದೆ ಅವರು ಸ್ವಸ್ಥರಾಗಿದ್ದಾಗ ಸಾಷ್ಟಾಂಗವೆರಗಲು ಅವರನ್ನು ಕರೆಯಲಾಗಿತ್ತು. (ಅವರು ಅದನ್ನು ಕಡೆಗಣಿಸಿದ್ದರು)
45.ನನ್ನನ್ನು ಬಿಟ್ಟು ಬಿಡಿ. ಈ ಸಂದೇಶವನ್ನು ತಿರಸ್ಕರಿಸಿದವನನ್ನು ನಾನು (ಅಲ್ಲಾಹ್) ನೋಡಿಕೊಳ್ಳುವೆನು. ಅವರಿಗೆ ಅರಿವೇ ಇಲ್ಲದಂತೆ ನಾವು ಕ್ರಮೇಣ ಅವರನ್ನು ಹಿಡಿದುಕೊಳ್ಳುವೆವು
47.(ದೂತರೇ,) ನೀವೇನು ಅವರೊಡನೆ ಏನಾದರೂ ಸಂಭಾವನೆಯನ್ನು ಕೇಳಿರುವಿರಾ? ಮತ್ತು ಅವರು ಅದರ ಭಾರದಡಿಯಲ್ಲಿ ನರಳುತ್ತಿದ್ದಾರೆಯೇ
49.(ದೂತರೇ,) ನೀವು ನಿಮ್ಮೊಡೆಯನ ಆದೇಶ ಬರುವ ತನಕ ಸಹನಶೀಲರಾಗಿರಿ. ಮತ್ತು ನೀವು ಮೀನಿನವರಂತೆ (ಯೂನುಸರಂತೆ) ಆಗದಿರಿ. ಅವರು ಬಹಳ ನೊಂದ ಸ್ಥಿತಿಯಲ್ಲಿ (ಅಲ್ಲಾಹನಿಗೆ) ಮೊರೆ ಇಟ್ಟಿದ್ದರು
50.ಅವರ ಒಡೆಯನ ಅನುಗ್ರಹವು ಅವರಿಗೆ ನೆರವಾಗದೆ ಇದ್ದಿದ್ದರೆ ಅವರು ತೀರಾ ಕೆಟ್ಟ ಸ್ಥಿತಿಯಲ್ಲಿ ಒಂದು ಬಟ್ಟ ಬಯಲಿಗೆ ಎಸೆಯಲ್ಪಡುತ್ತಿದ್ದರು
52.(ದೂತರೇ,) ಧಿಕ್ಕಾರಿಗಳು ಉಪದೇಶವನ್ನು ಕೇಳಿದಾಗ ತಮ್ಮ ದೃಷ್ಟಿಯಿಂದಲೇ ನಿಮ್ಮನ್ನು ನುಚ್ಚುನೂರು ಮಾಡುವರೋ ಎಂಬಂತೆ ನಿಮ್ಮೆಡೆಗೆ ನೋಡುತ್ತಾರೆ ಮತ್ತು ‘‘ಅವನು ಖಂಡಿತ ಹುಚ್ಚ’’ ಎನ್ನುತ್ತಾರೆ