31.ನಾವು ಮಲಕ್ಗಳನ್ನೇ ನರಕದ ಕಾವಲುಗಾರರಾಗಿಸಿರುವೆವು ಮತ್ತು ಅವರ ಸಂಖ್ಯೆಯನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಿರುವೆವು – ಗ್ರಂಥದವರು ನಂಬಲೆಂದು ಹಾಗೂ ವಿಶ್ವಾಸಿಗಳ ವಿಶ್ವಾಸವು ಹೆಚ್ಚಲೆಂದು ಮತ್ತು ಗ್ರಂಥದವರಾಗಲಿ ವಿಶ್ವಾಸಿಗಳಾಗಲಿ ಸಂಶಯಕ್ಕೆ ತುತ್ತಾಗಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಧಿಕ್ಕಾರಿಗಳು ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎಂದು ಕೇಳಲೆಂದು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ನಿಮ್ಮ ಒಡೆಯನ ಪಡೆಗಳ ಕುರಿತು ಅವನ ಹೊರತು ಬೇರೆ ಯಾರಿಗೂ ತಿಳಿಯದು. ಇದು ಮಾನವರಿಗಾಗಿರುವ ಉಪದೇಶ ಮಾತ್ರವಾಗಿದೆ
52.ನಿಜವಾಗಿ ಅವರ ಪೈಕಿ ಪ್ರತಿಯೊಬ್ಬರೂ, ತಮ್ಮ ಬಳಿಗೆ ತೆರೆದ ಗ್ರಂಥವೊಂದು (ಆಕಾಶದಿಂದ ಇಳಿದು) ಬರಬೇಕೆಂದು ಅಪೇಕ್ಷಿಸುತ್ತಿದ್ದಾರೆ
56.ಅಲ್ಲಾಹನು ಇಚ್ಛಿಸುವವನು ಮಾತ್ರ ಇದನ್ನು ನೆನಪಿಡುವನು. ಅವನು (ಅಲ್ಲಾಹನು) ಭಕ್ತಿಗೆ ಅರ್ಹನು ಹಾಗೂ ಕ್ಷಮಿಸುವವನಾಗಿದ್ದಾನೆ