2.ನಾವು ಮನುಷ್ಯನನ್ನು ಪರೀಕ್ಷಿಸಲಿಕ್ಕಾಗಿ, ಅವನನ್ನು ಮಿಶ್ರಿತ ವೀರ್ಯದಿಂದ ಸೃಷ್ಟಿಸಿರುವೆವು. ಮತ್ತು ನಾವು ಅವನನ್ನು ಕೇಳ ಬಲ್ಲವನಾಗಿಯೂ ನೋಡ ಬಲ್ಲವನಾಗಿಯೂ ಮಾಡಿರುವೆವು
9.(ಮತ್ತು ಅವರು ಹೇಳುತ್ತಾರೆ;) ‘‘ನಾವು ಕೇವಲ ಅಲ್ಲಾಹನ ಮೆಚ್ಚುಗೆಗಾಗಿ ನಿಮಗೆ ಉಣಿಸುತ್ತಿದ್ದೇವೆ. ನಿಮ್ಮಿಂದ ನಾವು ಯಾವುದೇ ಪ್ರತಿಫಲವನ್ನಾಗಲಿ ಕೃತಜ್ಞತೆಯನ್ನಾಗಲಿ ಬಯಸುವುದಿಲ್ಲ’’
13.ಅಲ್ಲಿ ಅವರು ಆಸನಗಳ ಮೇಲೆ ದಿಂಬುಗಳಿಗೆ ಒರಗಿ ಕೊಂಡಿರುವರು. ಅಲ್ಲಿ ಅವರು ತೀಕ್ಷ್ಣ ಬಿಸಿಲನ್ನಾಗಲಿ ತೀವ್ರ ಚಳಿಯನ್ನಾಗಲೀ ಕಾಣಲಾರರು
16.ಅದು ಕಲಾತ್ಮಕವಾಗಿ ಅಲಂಕರಿಸಿದ ಬೆಳ್ಳಿಯ ಗಾಜಾಗಿರುವುದು ಮತ್ತು ಅವುಗಳನ್ನು ತುಂಬುವವರು ಸರಿಯಾದ ಪ್ರಮಾಣದಲ್ಲಿ ತುಂಬಿರುವರು
19.ಸದಾ ಬಾಲಕರಾಗಿರುವವರು ಅಲ್ಲಿ ಸಂಚರಿಸುತ್ತಿರುವರು. ನೀವು ಅವರನ್ನು ಕಂಡರೆ, ಅವರು ಚದುರಿದ ಮುತ್ತುಗಳೆಂದು ಭಾವಿಸುವಿರಿ
21.ಅವರ ಮೇಲುಡುಪು ನುಣ್ಣಗೆಯ ಹಸಿರು ರೇಷ್ಮೆ ಹಾಗೂ ಉಣ್ಣೆಯದ್ದಾಗಿರುವುದು ಮತ್ತು ಅವರಿಗೆ ಬೆಳ್ಳಿಯ ಕಡಗಗಳನ್ನು ತೊಡಿಸಲಾಗುವುದು ಮತ್ತು ಅವರ ಒಡೆಯನು ಅವರಿಗೆ ಒಂದು ನಿರ್ಮಲ ಪಾನೀಯವನ್ನು ಕುಡಿಸುವನು
24.ನೀವು ನಿಮ್ಮೊಡೆಯನಿಗಾಗಿ ಸಹನಶೀಲರಾಗಿರಿ ಮತ್ತು ಅವರ (ಧಿಕ್ಕಾರಿಗಳ) ಪೈಕಿ ಯಾವುದೇ ಪಾಪಿಯ ಅಥವಾ ಕೃತಘ್ನನ ಮಾತನ್ನು ಅನುಸರಿಸಬೇಡಿರಿ
27.ಅವರು ಬೇಗನೆ ಸಿಗುವುದನ್ನು (ಇಹಲೋಕವನ್ನು) ಪ್ರೀತಿಸುತ್ತಾರೆ ಮತ್ತು ತಮ್ಮ ಮುಂದಿರುವ (ಲೋಕಾಂತ್ಯದ) ಮಹಾ ದಿನವನ್ನು ಕಡೆಗಣಿಸಿ ಬಿಡುತ್ತಾರೆ
28.ನಾವೇ ಅವರನ್ನು ಸೃಷ್ಟಿಸಿರುವೆವು ಮತ್ತು ಅವರ ಶರೀರದ ಗಂಟುಗಳನ್ನು ಬಲ ಪಡಿಸಿರುವೆವು ಮತ್ತು ನಾವು ಬಯಸಿದರೆ ಅವರ ಬದಲಿಗೆ ಅವರಂತಹ ಇತರರನ್ನು ತರಬಲ್ಲೆವು
30.ಅಲ್ಲಾಹನು ಇಚ್ಛಿಸುವ ತನಕ ನಿಮ್ಮ ಯಾವ ಇಚ್ಛೆಯೂ ನಡೆಯದು. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿರುತ್ತಾನೆ
31.ಅವನು ತಾನಿಚ್ಛಿಸಿದವರನ್ನು ತನ್ನ ಅನುಗ್ರಹದೊಳಗೆ ಸೇರಿಸಿಕೊಳ್ಳುತ್ತಾನೆ ಮತ್ತು ಅಕ್ರಮಿಗಳಿಗಾಗಿ ಅವನು ಕಠಿಣ ಶಿಕ್ಷೆಯನ್ನು ಸಿದ್ದವಾಗಿಟ್ಟಿದ್ದಾನೆ