تین
عبدالسلام پوتیگه · ಕನ್ನಡ
1.
ಅಂಜೂರದಾಣೆ ಹಾಗೂ ಇಪ್ಪೆಯಾಣೆ
2.
ಸೀನೀನ್ (ಸಿನಾಯ್) ಪರ್ವತದಾಣೆ
3.
ಮತ್ತು ಈ ಪ್ರಶಾಂತ ನಗರ (ಮಕ್ಕಃ)ದಾಣೆ
4.
ನಾವು ಮನುಷ್ಯನನ್ನು ಅತ್ಯುತ್ತಮ ಸ್ಪರೂಪದಲ್ಲಿ ಸೃಷ್ಟಿಸಿರುವೆವು
5.
ಆ ಬಳಿಕ ನಾವು ಅವನನ್ನು ತೀರಾ ಕೆಳಮಟ್ಟಕ್ಕೆ ಮರಳಿಸಿದೆವು
6.
ವಿಶ್ವಾಸಿಗಳಾದವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆ
7.
(ಮಾನವನೇ,) ಇಷ್ಟಾಗಿಯೂ ನೀನು ಪ್ರತಿಫಲದ ದಿನವನ್ನು ತಿರಸ್ಕರಿಸುವುದೇಕೆ
8.
ಎಲ್ಲ ತೀರ್ಪುಗಾರರಿಗಿಂತ ದೊಡ್ಡ ತೀರ್ಪುಗಾರನು ಅಲ್ಲಾಹನಲ್ಲವೇ